18 May 2024

ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್…! 15 ರಿಂದ 20 ಸಾವಿರದ ವರೆಗೆ ಸ್ಕಾಲರ್ಶಿಪ್ ಪಡೆದುಕೊಳ್ಳಲು ಈಗಲೇ ಅರ್ಜಿ ಸಲ್ಲಿಸಿ…! ಅರ್ಜಿ ಸಲ್ಲಿಸುವ ಕೊನೆಯ ದಿನಕ್ಕೆ ಈಗಲೇ ತಿಳಿಯಿರಿ..!

SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫಿಕ್ಸ್!

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಮತ್ತು ಪ್ರವರ್ಗ 1,  ಅಲೆಮಾರಿ / ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ  202324ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡುತ್ತಿರುವ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮುಖಾಂತರ ಅರ್ಜಿ ಆವಾನಿಸಲಾಗಿದೆ.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 10.01.2024 ಕೊನೆಯ ದಿನಾಂಕವಾಗಿದ್ದು, ಅರ್ಜಿ ಸಲ್ಲಿಸಲು ಅರ್ಹರಿರುವ ಎಲ್ಲಾ ಅಭ್ಯರ್ಥಿಗಳು ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಿ.
ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಅರ್ಜಿ ಸಲ್ಲಿಸುವ ಲಿಂಕ್ ಲೇಖನದ ಮುಂದಿನ ಭಾಗದಲ್ಲಿ ನೀಡಿರುತ್ತೇವೆ.

ನಮಸ್ಕಾರ ಆತ್ಮೀಯ ಬಂಧುಗಳೇ.

ನಮ್ಮ ಈ ಜ್ಞಾನ ಸಂಜೀವಿನಿ ವೆಬ್ ಸೈಟ್ ನಲ್ಲಿ ದಿನನಿತ್ಯ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ರೈತರಿಗೆ ಸಹಾಯವಾಗುವಂತಹ ಅನೇಕ ಲೇಖನಗಳನ್ನು ನಾವು ನೀಡುತ್ತಿದ್ದು, ಇಂದಿನ ಈ ಲೇಖನದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಪಡೆಯಲು ಲಭ್ಯವಿರುವಂತಹ ಅನೇಕ ವಿದ್ಯಾರ್ಥಿ ವೇತನಗಳ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಿದ್ದೇವೆ.

ವಿದ್ಯಾರ್ಥಿ ವೇತನಗಳ ಮಹತ್ವ

ಇಂದಿನ ಕಾಲದಲ್ಲಿ ಪ್ರತಿಭಾವಂತ ಮಕ್ಕಳಿಗೆ ಅನೇಕ ವಿದ್ಯಾರ್ಥಿ ವೇತನಗಳ ಲಭ್ಯವಿದ್ದು, ಆರ್ಥಿಕ ತೊಂದರೆಯಿಂದ ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದೇ ಇರುವಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳು ಅತ್ಯಂತ ಉಪಕಾರಿಯಾಗಿವೆ.  ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನೇಕ ವಿದ್ಯಾರ್ಥಿ ವೇತನಗಳು ಲಭ್ಯವಿವೆ. ಇವುಗಳಲ್ಲಿ ಕೆಲವಂದಿಷ್ಟನ್ನು ನಾವು ಪಟ್ಟಿ ಮಾಡಿ ನೀಡಿದ್ದೇವೆ.

• ಕರ್ನಾಟಕ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ
• ಹಿಂದುಳಿದ ವರ್ಗಗಳಿಗೆ ಸಂಶೋಧನಾ ಮಾರ್ಗದರ್ಶನ ಪಿಎಚ್ ಡಿ ಫೆಲೋಶಿಪ್
• ರೈತ ವಿದ್ಯಾನಿಧಿ
• ಎಸ್ ಎಸ್ ಪಿ ವಿದ್ಯಾರ್ಥಿ ವೇತನ
•  ಶ್ರೀರಾಮ್ ಟ್ರಾನ್ಸ್ಪೋರ್ಟ್ ಫೈನಾನ್ಸ್ ಕಂಪನಿ ಲಿಮಿಟೆಡ್ ವಿದ್ಯಾರ್ಥಿ ವೇತನ
• ಕರ್ನಾಟಕದ ಅಲ್ಪಸಂಖ್ಯಾತರಿಗೆ ಮೆಟ್ರಿಕ್ ನಂತರ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ
• ಕರ್ನಾಟಕದ ಅಲ್ಪಸಂಖ್ಯಾತರಿಗೆ ಮೆಟ್ರಿಕ್ ಪೂರ್ವ ಶಿಕ್ಷಣಕ್ಕಾಗಿ ವಿದ್ಯಾರ್ಥಿ ವೇತನ 
• ವಿದ್ಯಾಸಿರಿ ಮಂಡಳಿ ಮತ್ತು ವಸತಿ ವಿದ್ಯಾರ್ಥಿ ವೇತನ ಯೋಜನೆ
• ನ್ಯಾಷನಲ್ ಮೆರಿಟ್ ಕಮ್ ಮೀನ್ಸ್ ಸ್ಕಾಲರ್ಶಿಪ್ ಕರ್ನಾಟಕ

ಈ ಮೇಲೆ ನೀಡಿರುವ ಎಲ್ಲಾ ವಿದ್ಯಾರ್ಥಿ ವೇತನಗಳು ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅತ್ಯಂತ ಉಪಕಾರಿಯಾದ ಹಾಗೂ ಆರ್ಥಿಕ ಸಮಸ್ಯೆಯಿಂದ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಾಗದೆ ನಮ್ಮ ಶಿಕ್ಷಣವನ್ನು ಅರ್ಧಕ್ಕೆ ಬಿಟ್ಟ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಗಳು ಅತ್ಯಂತ ಸಹಕಾರಿಯಾಗಿದೆ ಎಂದರೆ ತಪ್ಪಾಗಲಾರದು. ಈ ಒಂದು ಲೇಖನದಲ್ಲಿ ನಾವು ಮೇಲಿನಿರುವ ಎಲ್ಲಾ ವಿದ್ಯಾರ್ಥಿ ವೇತನಗಳನ್ನು ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ.

ನಮ್ಮ ಕರ್ನಾಟಕ ರಾಜ್ಯವು ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಅದರಲ್ಲಿಯೂ ಹೆಚ್ಚಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹೆಚ್ಚಿನ ಒಂದು ಒತ್ತುವನ್ನು ಕೊಡುತ್ತಿದ್ದು  , ಕರ್ನಾಟಕ ರಾಜ್ಯವನ್ನು ಶೈಕ್ಷಣಿಕ ಕೇಂದ್ರವೆಂದು ಕರೆಯಲ್ಪಡುತ್ತದೆ.

ಅಂದಹಾಗೆ ಕರ್ನಾಟಕ ರಾಜ್ಯದಲ್ಲಿ ಎರಡುವರೆ ಲಕ್ಷಕ್ಕಿಂತ ಹೆಚ್ಚಿನ ಶಿಕ್ಷಕರು ಮತ್ತು 80 ಲಕ್ಷಕ್ಕಿಂತ ಹೆಚ್ಚು ವಿದ್ಯಾರ್ಥಿಗಳ ಸಂಖ್ಯೆ ನಮ್ಮ ಕರ್ನಾಟಕ ರಾಜ್ಯ ಹೊಂದಿದೆ. ಇದನ್ನು ಕೇಳಲು ನಮಗೆ ಬಹಳ ಹೆಮ್ಮೆ ಅನಿಸುತ್ತದೆ. ವಿದ್ಯಾರ್ಥಿ ವೇತನಗಳು ವಿದ್ಯಾರ್ಥಿಯ ಒಂದು ಶೈಕ್ಷಣಿಕ ಹಂತದಲ್ಲಿ ಆರ್ಥಿಕ ಸಮಸ್ಯೆ ನಿವಾರಿಸಲು ಒಂದು ರಾಮಬಾಣವಾಗಿದೆ.

ಆರ್ಥಿಕ ಸಮಸ್ಯೆಯಿಂದ ಅನೇಕ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಅರ್ಧಕ್ಕೆ ಬಿಟ್ಟು ಇತರೆ ದಾರಿಯನ್ನು ಹಿಡಿದು ಶಿಕ್ಷಣವನ್ನು ಬಿಟ್ಟೆ ಬಿಡುತ್ತಾರೆ. ಅಂತಹ ವಿದ್ಯಾರ್ಥಿಗಳಿಗೆ ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಲು ವಿದ್ಯಾರ್ಥಿ ವೇತನಗಳು ಅತ್ಯಂತ ಸಹಕಾರಿಯಾಗಿದ್ದು ಮೇಲೆ ನೀಡಿರುವ ಎಲ್ಲಾ ವಿದ್ಯಾರ್ಥಿ ವೇತನಗಳ ಪಟ್ಟಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಿರುವ ಲೇಖನದಲ್ಲಿ ತಿಳಿದುಕೊಳ್ಳೋಣ.

ಮೊದಲಿಗೆ ನಾವು ಎಲ್ಲ ವಿದ್ಯಾರ್ಥಿ ವೇತನಗಳಲ್ಲಿ ಕರ್ನಾಟಕ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡ ನಂತರ ಉಳಿದ ಎಲ್ಲಾ ವಿದ್ಯಾರ್ಥಿ ವೇತನಗಳ ಬಗ್ಗೆ ತಿಳಿದುಕೊಳ್ಳೋಣ.

1. ಕರ್ನಾಟಕ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ :

ಕರ್ನಾಟಕ ರಾಜ್ಯ ಸರ್ಕಾರದ ವಿದ್ಯಾರ್ಥಿ ವೇತನ ಇದಾಗಿದ್ದು,   ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕ ಸಹಾಯ ನೀಡುವ ವಿದ್ಯಾರ್ಥಿ ವೇತನ ಇದಾಗಿದೆ. ಈ ವಿದ್ಯಾರ್ಥಿ ವೇತನವನ್ನು ಕರ್ನಾಟಕದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಈ ವಿದ್ಯಾರ್ಥಿ ವೇತನ ಉದ್ದೇಶವು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶ ಈ ವಿದ್ಯಾರ್ಥಿ ವೇತನ ಆಗಿದೆ.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು, ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ ನಲ್ಲಿ ಎಲ್ಲಾ ಇಲಾಖೆಯ ವಿದ್ಯಾರ್ಥಿ ವೇತನಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ಲಿ ಎರಡು ರೀತಿಯ ವಿದ್ಯಾರ್ಥಿ ವೇತನಗಳು ಅಂದರೆ ಎರಡು ವರ್ಗದ ವಿದ್ಯಾರ್ಥಿಗಳಿಗೆ ಪ್ರತ್ಯೆಕ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಬಹುದಾಗಿದೆ. ಮೊದಲನೆಯದು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮತ್ತೊಂದು ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಬಗ್ಗೆ ತಿಳಿದುಕೊಳ್ಳುವುದಾದರೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು  ಒಂದನೇ ತರಗತಿಯಿಂದ ಪಿಯುಸಿವರೆಗೆ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ಅದೇ ರೀತಿ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವು ಪದವಿ ನಂತರ ಬರುವ ವಿವಿಧ ಕೋರ್ಸ್ ಗಳಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. 

ಈ ಒಂದು ವಿದ್ಯಾರ್ಥಿ ವೇತನಗಳ ಸಹಾಯದಿಂದ ಅನೇಕ ವಿದ್ಯಾರ್ಥಿಗಳು ತಮ್ಮ ಶಾಲಾ ಶುಲ್ಕವನ್ನು ತಮ್ಮ ವಿದ್ಯಾರ್ಥಿ ವೇತನದಲ್ಲೇ   ಕಟ್ಟಿಕೊಳ್ಳುತ್ತಿದ್ದಾರೆ. ಈ ವಿದ್ಯಾರ್ಥಿ ವೇತನವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಯೋಜನೆಯಾಗಿದೆ.

ಎಸ್‌ಎಸ್‌ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅನೇಕ ದಾಖಲೆಗಳು ಅವಶ್ಯಕವಾಗಿರುತ್ತವೆ. ಅವುಗಳಲ್ಲಿ ಕೆಲವೊಂದಿಷ್ಟು ಉಪಯುಕ್ತವಾದ ದಾಖಲೆಗಳ ಪಟ್ಟಿ ಈ ಕೆಳಗಿನಂತಿದೆ. ನೀವು ಎಸ್‌ಎಸ್‌ಪಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದಾದರೆ  ಈ ಕೆಳಗಿನ ದಾಖಲೆಗಳು ಅತಿ ಅವಶ್ಯಕವಾಗಿರುತ್ತದೆ. ನೀವು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವಾಗ ಈ ಕೆಳಗಿನ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಅರ್ಜಿ ಸಲ್ಲಿಸಿ. ಈಗ ಅರ್ಜಿ ಸಲ್ಲಿಸಲು ಬೇಕಾಗಿರುವ ಪ್ರಮುಖ ದಾಖಲಾತಿಗಳನ್ನು ನೋಡುವುದಾದರೆ ದಾಖಲಾತಿಗಳ ಪಟ್ಟಿ ಕೆಳಗಿನಂತಿದೆ.

ಅಗತ್ಯವಿರುವ ದಾಖಲೆಗಳ ಪಟ್ಟಿ :

ಶಿಕ್ಷಣಕ್ಕಾಗಿ ಕಟ್ಟಿರುವ ಶಿಕ್ಷಣ ಶುಲ್ಕದ ರಶೀದಿ
ವಿದ್ಯಾರ್ಥಿಯ ಆಧಾರ್ ಕಾರ್ಡ್
ವಿದ್ಯಾರ್ಥಿಯ ತಂದೆಯ ಆಧಾರ್ ಕಾರ್ಡ್
ವಿದ್ಯಾರ್ಥಿಯ ತಾಯಿಯ ಆಧಾರ್ ಕಾರ್ಡ್
ಖಾಸಗಿ ಅಥವಾ ಸರ್ಕಾರಿ ಹಾಸ್ಟೆಲ್ ಐಡಿ
ಇ ಡಬ್ಲ್ಯೂ ಎಸ್ ಪ್ರಮಾಣ ಪತ್ರ
ಆದಾಯ ಪ್ರಮಾಣ ಪತ್ರ
ರೇಷನ್ ಕಾರ್ಡ್ ಅಥವಾ ಪಡಿತರ ಕಾರ್ಡ್ ಸಂಖ್ಯೆ
ಮೊಬೈಲ್ ನಂಬರ್
ಕಾಲೇಜ್ ಅಥವಾ ಸಂಸ್ಥೆಯ ನೊಂದಣಿ ಸಂಖ್ಯೆ
ಅಂಗವಿಕಲ ಕಾರ್ಡ ( ನೀವು ವಿಶೇಷ ಚೇತನರಾಗಿದ್ದರೆ )

ಎಸ್ ಎಸ್ ಪಿ ವಿದ್ಯಾರ್ಥಿ ವೇತನದ ಬಗ್ಗೆ  ಸಂಪೂರ್ಣ ಮಾಹಿತಿ ಅಂತ ತಿಳಿದುಕೊಂಡ ನಂತರ ಈ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಬೇಕಾಗಿರುವ ಅಧಿಕೃತ ಜಾಲತಾಣದ ಲಿಂಕ್ ಈ ಕೆಳಗಿದೆ.

ನೀವು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದಾದರೆ ಈ ಕೆಳಗಿನ ಲಿಂಕ್ ಮುಖಾಂತರ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಈಗಾಗಲೇ ನಿಗದಿಪಡಿಸಲಾಗಿತ್ತು : ಜನವರಿ 10,  2024 ರಂದು ಕೊನೆಯ ದಿನಾಂಕವಾಗಿದೆ.

ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಬೇಕಾದ ವೆಬ್ಸೈಟನ ವಿಳಾಸ :

https://ssp.postmatric.karnataka.gov.in

ಕಾರ್ಯಕ್ರಮಗಳ ವಿವರ, ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ, ಅರ್ಜಿ ಸಲ್ಲಿಸಲು ಬೇಕಾದ ಇತರೆ  ದಾಖಲಾತಿಗಳು ಅದೇ ರೀತಿ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಬೇಕಾದರೆ ಈ ಕೆಳಗೆ ನೀಡಿರುವ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ನೀವು ಸಂಪೂರ್ಣ ಮಾಹಿತಿಯನ್ನು ಪಡೆಯಬಹುದಾಗಿದೆ.

ವೆಬ್ಸೈಟ್ನ ಲಿಂಕ್ :


https://bcwd.karnataka.gov.in

ಅದೇ ರೀತಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾದರೆ ನೀವು ಈ ಕೆಳಗಿನ ಹೇಳಿರುವ ಸಹಾಯವಾಣಿಗೆ ಕರೆ ಮಾಡಿ ನಿಮ್ಮ ತೊಂದರೆಗೆ ಪರಿಹಾರ ಪಡೆದುಕೊಳ್ಳಬಹುದು. ಅದೇ ರೀತಿ ನಾವು ಸಹಾಯವಾಣಿ ಸಂಖ್ಯೆಯ ಜೊತೆಗೆ ಇಮೇಲ್ ವಿಳಾಸವನ್ನು ಕೂಡ ನೀಡಿದ್ದೇವೆ.

ಅರ್ಜಿ ಸಲ್ಲಿಸುವಾಗ ಯಾವುದೇ ತಾಂತ್ರಿಕ ತೊಂದರೆ ಉಂಟಾದರೆ ಕೆಳಗೆ ನೀಡಿರುವ ಇಮೇಲ್ ಗೆ ನಿಮ್ಮ ಸಂದೇಶವನ್ನು ಕಳುಹಿಸಿ ನಿಮ್ಮ ತೊಂದರೆಗೆ ಪರಿಹಾರ ಪಡೆದುಕೊಳ್ಳಬಹುದಾಗಿದೆ.

ಸಹಾಯವಾಣಿ ಸಂಖ್ಯೆ : 8050770005
ಇಮೇಲ್ : bcwdhelpline@gmail.com

ಈ ಒಂದು ಮೇಲಿನ ಮಾಹಿತಿಯಲ್ಲಿ ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮತ್ತು ಮೆಟ್ರಿಕ್ ನಂತರದ  ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗಿರುವ ಸಂಪೂರ್ಣ ಮಾಹಿತಿಯನ್ನು ನಾವು ನೀಡಿದ್ದೇವೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಹಂತಗಳನ್ನು ಕ್ರಮವಾಗಿ ಅನುಸರಿಸಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ಕೆಳಗಿನ ಸಂಪೂರ್ಣ ಮಾಹಿತಿಯನ್ನು ತೆಗೆದುಕೊಂಡು ನೀವು ಅರ್ಹರಿದ್ದರೆ ಈ ಕೂಡಲೇ ಅರ್ಜಿ ಸಲ್ಲಿಸಿ.

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಎಸ್ ಎಸ್ ಪಿ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮುಖ್ಯವಾಗಿ ಕುಟುಂಬ ಐಡಿ ಅವಶ್ಯಕತೆ. ಈ ವಿದ್ಯಾರ್ಥಿ ವೇತನವನ್ನು ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸವನ್ನು ಯಾವುದೇ ಆರ್ಥಿಕ ತೊಂದರೆ ಇಲ್ಲದೆ ಶಿಕ್ಷಣವನ್ನು ಮುಂದುವರಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ನೀವು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮುಖ್ಯವಾಗಿ ಕುಟುಂಬ ಐಡಿ ಬೇಕಾಗುತ್ತದೆ. ಈ ವಿದ್ಯಾರ್ಥಿ ವೇತನಕ್ಕೆ ಯಾರೆಲ್ಲ ಅರ್ಜಿ ಸಲ್ಲಿಸಬಹುದೆಂದು ನೋಡಿದರೆ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ  ವಿದ್ಯಾಭ್ಯಾಸ ಮಾಡುತ್ತಿರುವ  ಎಲ್ಲಾ ಹಿಂದುಳಿದ ವರ್ಗಗಳ ಸೇರಿದ ಪ್ರವರ್ಗ ಒಂದಕ್ಕೆ ಸೇರಿದ ಮತ್ತು ಅಲೆಮಾರಿ ಮತ್ತು ಅಲೆ ಅಲೆಮಾರಿ ವರ್ಗಕ್ಕೆ ಸೇರಿದ ಎಲ್ಲಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

SSP ವಿದ್ಯಾರ್ಥಿ ವೇತನದ ಪ್ರಯೋಜನಗಳು :
ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಎಸ್ ಎಸ್ ಪಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದರಿಂದ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ.

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಮುಖ್ಯವಾಗಿ ಕುಟುಂಬ ಐಡಿ ಕಡ್ಡಾಯವಾಗಿರುತ್ತದೆ. ಈ ಕುಟುಂಬ ಐಡಿಯನ್ನು ನಿಮ್ಮ ಮೊಬೈಲ್ ನಲ್ಲಿ ಆರಾಮವಾಗಿ ಕೆಲವೇ ನಿಮಿಷದಲ್ಲಿ ಪಡೆಯಬಹುದಾಗಿದೆ.

ಈ ಕುಟುಂಬ ಐಡಿಯನ್ನು ನಿಮ್ಮ ಮೊಬೈಲ್ ನಲ್ಲಿ ಪಡೆಯುವುದು ಹೇಗೆ ಎಂಬ ಸಂಪೂರ್ಣ ಮಾಹಿತಿ ಈ ಕೆಳಗಿನ ಲೇಖನದಲ್ಲಿದೆ.
ಕುಟುಂಬ ಐಡಿ ಪಡೆಯಲು ನಾವು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಲಾಗುವ ಯಾವುದಾದರೂ ಒಂದು ದಾಖಲಾತಿಯನ್ನು ನೀವು ಆಯ್ಕೆ ಮಾಡಿಕೊಳ್ಳಬೇಕು. ಆ ದಾಖಲಾತಿಗಳಲ್ಲಿ ಅಲ್ಲಿ ಕೇಳುವುದು ರೇಷನ್ ಕಾರ್ಡ್ ಆಧಾರ್ ಕಾರ್ಡ್ ಅಥವಾ ಫ್ರೂಟ್ಸ್ ನಂಬರ್.

ಇವುಗಳಲ್ಲಿ ಯಾವುದಾದರೂ ಒಂದು ನಂಬರನ್ನು ಹಾಕಿ ನಂತರ ಅಲ್ಲಿ ತೋರಿಸುವ ನಾಲ್ಕು ಅಂಕಿಯ ಕ್ಯಾಪ್ಚರ್ ಕೋಡನ್ನು ನಮೂದಿಸಬೇಕು .  ನಾಲ್ಕು ಅಂಕಿಯ ಕ್ಯಾಪ್ಚ ಕೋಡ್ ನಮೂದಿಸಿದ ನಂತರ ಅಲ್ಲಿ ಕೇಳಲಾಗುವ ಶೋ ಡಾಟಾ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಕುಟುಂಬ ಐಡಿಯನ್ನು ಅಲ್ಲಿ ತೋರಿಸಲಾಗುತ್ತದೆ.

ಕುಟುಂಬ ಐಡಿಯಾ ನಂಬರ್ ಅನ್ನ ಪಡೆಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಲಿಂಕ್ :
https://kutumba-services.karnataka.gov.in/KutumbaServices

ಕರ್ನಾಟಕ ರಾಜ್ಯ ಸರ್ಕಾರದ ಈ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡ ನಂತರ ನಾವು ಇನ್ನೂ ಹಲವಾರು ಲಭ್ಯವಿರುವ ವಿದ್ಯಾರ್ಥಿ ವೇತನಗಳ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಅಂಕಣದಲ್ಲಿ ನಾವು ತಿಳಿದುಕೊಳ್ಳೋಣ.

ನೀವು ಪಿ ಎಚ್ ಡಿ ಮಾಡಬಯಸುವಿರಾ?
ಹಾಗಿದ್ದರೆ ಇಲ್ಲಿದೆ ನಿಮಗೆ ಉತ್ತಮ ವಿದ್ಯಾರ್ಥಿ ವೇತನ

ನಂತರ ಲಭ್ಯವಿರುವ ವಿದ್ಯಾರ್ಥಿ ವೇತನವೆಂದರೆ ಹಿಂದುಳಿದ ವರ್ಗಗಳಿಗೆ ಸಂಶೋಧನಾ ಮಾರ್ಗದರ್ಶನ ಪಿ ಎಚ್ ಡಿ ಫೆಲೋಶಿಪ್. ಈ ವಿದ್ಯಾರ್ಥಿ ವೇತನವು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಪಿ ಎಚ್ ಡಿ ಮಾಡಲು ಆರ್ಥಿಕ ಸಹಾಯವನ್ನು ಒದಗಿಸುವ ವಿದ್ಯಾರ್ಥಿ ವೇತನ ಇದಾಗಿದೆ.

ಈ ಒಂದು ವಿದ್ಯಾರ್ಥಿ ವೇತನವು ಪಿ ಎಚ್ ಡಿ ಮಾಡಬಯಸುವ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ನೀಡುತ್ತದೆ. ಒಂದು ವೇಳೆ ಈ ವಿದ್ಯಾರ್ಥಿ ವೇತನಕ್ಕೆ ನೀವು ಅರ್ಜಿ ಸಲ್ಲಿಸಿ ಅರ್ಹರಾದರೆ ಮತ್ತು ಆಯ್ಕೆಯಾದರೆ ನಿಮಗೆ ಪಿ ಎಚ್ ಡಿ ಮುಗಿಸಲು ಮಾಸಿಕವಾಗಿ 5000ಗಳನ್ನು ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ. ವಿದ್ಯಾರ್ಥಿಗಳು ಪಿ ಹೆಚ್ ಡಿ ಯನ್ನು ಈ ಕೆಳಗಿನ ವಿಷಯಗಳಲ್ಲಿ ಮಾಡಬೇಕಾಗುತ್ತದೆ. ಈ ಕೆಳಗಿನ ವಿಷಯಗಳಲ್ಲಿ ಮಾಡುವ ವಿದ್ಯಾರ್ಥಿಗಳು ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಈ ವಿಷಯಗಳು ಯಾವುಗಳೆಂದರೆ ತಿಳಿದುಕೊಳ್ಳುವುದಾದರೆ ಸಮಾಜಶಾಸ್ತ್ರ ವಿಜ್ಞಾನ, ತಂತ್ರಜ್ಞಾನ, ಕೃಷಿ, ತಾಂತ್ರಿಕ ಮತ್ತು ವೈದ್ಯಕೀಯ ವಿಜ್ಞಾನಗಳು, ವಾಣಿಜ್ಯ ಮತ್ತು ನಿರ್ವಹಣೆ ಕ್ಷೇತ್ರದಲ್ಲಿ ಪೂರ್ಣಸಮಯದ ಪಿಎಚ್ ಡಿ ಕಾರ್ಯಕ್ರಮವನ್ನು ನೀವು ಮಾಡಲಿ ಸಿದ್ದರಿದ್ದರೆ ಈ ಕೂಡಲೇ ನೀವು ಅರ್ಜಿ ಸಲ್ಲಿಸಲು ಅರ್ಹರಿರುತ್ತೀರಿ.

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಸಾಮಾನ್ಯವಾಗಿ ಪ್ರತಿ ವರ್ಷ ಅಕ್ಟೋಬರ್ ನಿಂದ ಡಿಸೆಂಬರ್ ನವರಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಈ ಒಂದು ಸಮಯವು ಅಥವಾ ಈ ಒಂದು ಅವಧಿಯು ತಾತ್ಕಾಲಿಕವಾಗಿದ್ದು, ಅದು ಪ್ರತಿ ವರ್ಷ ಬದಲಾಗುತ್ತಿರಬಹುದು. ಆದ್ದರಿಂದ ನೀವು ಪ್ರತಿ ವರ್ಷ ಅರ್ಜಿ ಸಲ್ಲಿಸುವಾಗ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತೆಗೆದುಕೊಂಡು ನಂತರ ನೀವು ಅರ್ಹರೆನಿಸಿದರೆ ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ನಿಮ್ಮ ಪಿ ಎಚ್ ಡಿ ಕಾರ್ಯಕ್ರಮವನ್ನು ಪೂರ್ಣಗೊಳಿಸಿ ಸರ್ಕಾರದ ಈ ಯೋಜನೆಯ ಲಾಭವನ್ನು ಪಡೆದು ಡಾಕ್ಟರೇಟ್ ಎಂಬ ನಿಮ್ಮ ಹೆಸರಿನ ಹಿಂದೆ ನಿಮ್ಮದಾಗಿಸಿಕೊಳ್ಳಿ.

ನೀವು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ್ದೀರಾ?
ವಿದೇಶದಲ್ಲಿ ಶಿಕ್ಷಣ ಮಾಡಬಯಸುವಿರಾ? ಹಾಗಿದ್ದರೆ ಇಲ್ಲಿದೆ ಸಂಪೂರ್ಣ ಮಾಹಿತಿ.

ಕರ್ನಾಟಕ ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನ ಮಾಡಲು ಆರ್ಥಿಕ ಸಹಾಯ ನೀಡುತ್ತಿದೆ. ಅನೇಕ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಅಥವಾ ಅಧ್ಯಯನವನ್ನು ವಿದೇಶದಲ್ಲಿ ಮಾಡುವ ಕನಸನ್ನು ಇಟ್ಟುಕೊಂಡಿರುತ್ತಾರೆ.

ಆದರೆ ಅನೇಕ ವಿದ್ಯಾರ್ಥಿಗಳು ಆರ್ಥಿಕ ತೊಂದರೆಯಿಂದ ಶಿಕ್ಷಣವನ್ನು ವಿದೇಶದಲ್ಲಿ ಮಾಡಲಾಗದೆ ತಮ್ಮ ಕನಸನ್ನು ಮಾಡಿಕೊಳ್ಳುತ್ತಾರೆ. ಇಂತಹ ಒಂದು ಆಸೆಯನ್ನು ಅಥವಾ ಕನಸನ್ನು ಇಟ್ಟುಕೊಂಡವರಿಗೆ ಕರ್ನಾಟಕ ರಾಜ್ಯ ಸರ್ಕಾರದ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣ ಇಲಾಖೆಯು ವಿದ್ಯಾರ್ಥಿಗಳಿಗೆ ಅಂದರೆ ಅಲ್ಪ ಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮಾತ್ರ ದೇಶದಲ್ಲಿ ಅಧ್ಯಯನ ಮಾಡಲು ಅಥವಾ ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಪಡೆಯಲು ಎರಡು ವರ್ಷಗಳ ಅವಧಿಯವರೆಗೆ 20 ಮಿಲಿಯನ್ವರೆಗೆ ಹಣಕಾಸಿನ ನೆರವು ನೀಡುತ್ತಿದೆ.

ವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಪಡೆಯಲು ಕನಸನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಇದು ಒಂದು ಉತ್ತಮ ಅವಕಾಶವಾಗಿದ್ದು ಈ ಒಂದು ವಿದ್ಯಾರ್ಥಿ ವೇತನದ ಲಾಭವನ್ನು ಪಡೆದುಕೊಳ್ಳಿ. ಪ್ರತಿ ವರ್ಷ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿಯು ಮೇ ತಿಂಗಳಿನಿಂದ ಜುಲೈ ತಿಂಗಳವರೆಗೆ ಇರುತ್ತದೆ. ಈ ಅವಧಿಯು ತಾತ್ಕಾಲಿಕವಾಗಿದ್ದು, ಇಲಾಖೆಯ ಅನುಕೂಲಕ್ಕೆ ತಕ್ಕಂತೆ ಅವಧಿಯು ಬದಲಾಗುತ್ತಿರಬಹುದು.


ಆದ್ದರಿಂದ ನೀವು ಇಲಾಖೆ ವೆಬ್ ಸೈಟಿಗೆ ಭೇಟಿ ನೀಡಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ಬೇಕು ಬೇಕಾದಾಗ ಪಡೆದುಕೊಳ್ಳಬಹುದಾಗಿದೆ. ಉನ್ನತ ಶಿಕ್ಷಣವನ್ನು ವಿದೇಶದಲ್ಲಿ ಮಾಡುವುದರಿಂದ ಅನೇಕ ಲಾಭಗಳು ಇವೆ. ಅವುಗಳೆಂದರೆ ನೀವು ಬೇರೆ ದೇಶಗಳ ಭಾಷೆಯನ್ನು ಕಲಿಯಬಹುದು ಅಲ್ಲಿನ ಸಂಸ್ಕೃತಿಯನ್ನು ಕಲಿಯಬಹುದು.

ಒಂದು ವೇಳೆ ನೀವು ಅಮೆರಿಕದಲ್ಲಿ ಉನ್ನತ ಶಿಕ್ಷಣವನ್ನು ಮುಗಿಸಿ ಭಾರತಕ್ಕೆ ಬಂದರೆ ಇಂಗ್ಲಿಷ್ ಜ್ಞಾನ ನಿಮ್ಮಲ್ಲಿ ಹೆಚ್ಚಾಗುತ್ತದೆ. ಇಂಗ್ಲಿಷ್ ಜ್ಞಾನ ಹೆಚ್ಚಾಗುವುದರಿಂದ, ಭಾರತದಲ್ಲಿ ನಿಮ್ಮ ಬೇಡಿಕೆಯು ಹೆಚ್ಚಾಗುತ್ತದೆ. ಅದೇ ರೀತಿ ನಿಮ್ಮ ಜ್ಞಾನಕ್ಕೆ ತಕ್ಕಂತೆ ನಿಮಗೆ ಸಂಬಳವ ಕೂಡ ಹೆಚ್ಚಾಗಿ ಸಿಗುತ್ತದೆ. ಇದೇ ರೀತಿ ವಿದೇಶದಲ್ಲಿ ಓದುವುದರಿಂದ ಅನೇಕ ಲಾಭಗಳಿದ್ದು, ಹಲವಾರು ವಿದ್ಯಾರ್ಥಿಗಳು ಆರ್ಥಿಕ ಸಮಸ್ಯೆಯಿಂದ ವಿದೇಶದಲ್ಲಿ ಓದುವ ಕನಸನ್ನು ಮಾಡಿಕೊಳ್ಳುತ್ತಾರೆ.

ಅಂತಹ ವಿದ್ಯಾರ್ಥಿಗಳಿಗೆ ಈ ಒಂದು ಸರ್ಕಾರದ ವಿದ್ಯಾರ್ಥಿ ವೇತನಗಳು ಅತ್ಯಂತ ಉಪಕಾರಿಯಾಗಿದೆ. ಆದ್ದರಿಂದ ನೀವು ಇಂತಹ ವಿದ್ಯಾರ್ಥಿ ವೇತನಗಳ ಪಡೆಯಲು ಅರ್ಹರಿದ್ದಾರೆ ತಡ ಮಾಡದೆ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಿದಾಗ ಅರ್ಜಿ ಸಲ್ಲಿಸಿ ಈ ಲಾಭವನ್ನು ಪಡೆಯಿರಿ.

ನೀವು ರೈತರ ಮಕ್ಕಳೇ ಹಾಗಿದ್ದರೆ ಇಲ್ಲಿದೆ ನಿಮಗೆ ವಿದ್ಯಾರ್ಥಿ ವೇತನ : ಕರ್ನಾಟಕ ರಾಜ್ಯ ಸರ್ಕಾರದ ವಿದ್ಯಾರ್ಥಿ ವೇತನವಾಗಿರುವ ರೈತ ವಿದ್ಯಾನಿಧಿ. ಈ ಒಂದು ವಿದ್ಯಾರ್ಥಿ ವೇತನವನ್ನು ಕರ್ನಾಟಕ ರಾಜ್ಯದ ರೈತರ ಮಕ್ಕಳಿಗೆ ವಿದ್ಯಾಭ್ಯಾಸವನ್ನು ಮುಂದುವರಿಸಲು ಆರ್ಥಿಕ ಸಹಾಯ ನೀಡುವ ವಿದ್ಯಾರ್ಥಿ ವೇತನ ಇದಾಗಿದೆ.

ಈ ವಿದ್ಯಾರ್ಥಿ ವೇತನದ ಹೆಸರು ” ಮುಖ್ಯಮಂತ್ರಿ ರೈತ ವಿದ್ಯಾನಿಧಿ “. ಕರ್ನಾಟಕ ರಾಜ್ಯದ ಅನೇಕ ರೈತರ ಮಕ್ಕಳು ಆರ್ಥಿಕ ತೊಂದರೆಯಿಂದ ಶಿಕ್ಷಣವನ್ನು ಮುಂದುವರಿಸಲಾರದೆ ಅರ್ಧಕ್ಕೆ ಬಿಟ್ಟು ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ಸಾಧ್ಯವೇ ಆಗುವುದಿಲ್ಲ.

ಇದನ್ನು ಅರಿತ ಕರ್ನಾಟಕ ರಾಜ್ಯ ಸರ್ಕಾರವು ಬಸವರಾಜ ಬೊಮ್ಮಾಯಿ ಅವರ ಮುಖ್ಯಮಂತ್ರಿ ಆಡಳಿತದಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿಯನ್ನು ಜಾರಿಗೆ ತಂದರು. ಈ ವಿದ್ಯಾರ್ಥಿ ವೇತನವು ಎಲ್ಲಾ ರೈತರ ಮಕ್ಕಳಿಗೆ ಕರ್ನಾಟಕ ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲ ರೈತರ ಮಕ್ಕಳಿಗೆ ಅವರ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಹುಡುಗಿಯರಿಗೆ ಮತ್ತು ಹುಡುಗರಿಗೆ ಪ್ರತ್ಯೇಕ ವಿದ್ಯಾರ್ಥಿ ವೇತನವನ್ನು ನಿಗದಿಪಡಿಸಲಾಗಿದೆ.

ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆ ಯೋಜನೆಯ ಪ್ರಯೋಜನಗಳು ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಮಗ್ರ ಮಾಹಿತಿಯನ್ನು ಈ ಲೇಖನವು ಒಳಗೊಂಡಿದೆ.

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಅವರ ಕೋರ್ಸ್ ಗಳಿಗೆ ಅನುಗುಣವಾಗಿ ವಿವಿಧ ರೀತಿಯ ಮೊತ್ತವನ್ನು ನಿಗದಿಪಡಿಸಲಾಗಿದ್ದು ಅದರ ಸಂಪೂರ್ಣ ಮಾಹಿತಿ ಈ ಕೆಳಗಿದೆ.

ಪಿಯುಸಿ ಐಟಿಐ ಡಿಪ್ಲೋಮಾ ಓದುತ್ತಿರುವ ವಿದ್ಯಾರ್ಥಿಗಳಿಗೆ ವರ್ಷಕ್ಕೆ 2500 ರೂ. ನೀಡುತ್ತಿದ್ದು ಅದೇ ರೀತಿ ಇದೇ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ವಾರ್ಷಿಕ 3000 ರೂಪಾಯಿಯನ್ನು ನೀಡಲಾಗುತ್ತಿದೆ.

ಈ ರೀತಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ, ರೈತರ ಮಕ್ಕಳಿಗೆ ಆರ್ಥಿಕ ಸಹಾಯವನ್ನು ನೀಡಲು ಒಂದು ಉತ್ತಮ ಯೋಜನೆಯಾಗಿದೆ ಎಂದರೆ ತಪ್ಪಾಗಲಾರದು.

ಇನ್ನು ವಿವಿಧ ಕೋರ್ಸ್ಗಳಿಗೆ ನಿಗದಿಪಡಿಸಿರುವ ವಿದ್ಯಾರ್ಥಿ ವೇತನದ ಬಗ್ಗೆ ತಿಳಿದುಕೊಳ್ಳುವುದಾದರೆ ಪದವಿ ಓದುತ್ತಿರುವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಬೇರೆ ಹಣವನ್ನು ನಿಗದಿಪಡಿಸಲಾಗಿದೆ.

ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ( ಇಂಜಿನಿಯರಿಂಗ್ ಕೋರ್ಸ್ ಅನ್ನು ಹೊರತುಪಡಿಸಿ ) ವಾರ್ಷಿಕವಾಗಿ 5000 ರೂಪಾಯಿಯನ್ನು ನೀಡುತ್ತಿದ್ದು ಅದೇ ರೀತಿ ವಿದ್ಯಾರ್ಥಿನಿಯರಿಗೆ ವಾರ್ಷಿಕವಾಗಿ ಅವರ ಕೋರ್ಸ್ ಮುಗಿಯವರೆಗೆ 5500 ರೂ. ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ಇನ್ನು ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಅಡಿಯಲ್ಲಿ ಪ್ಯಾರಾಮೆಡಿಕಲ್ ಸೇರಿದಂತೆ ಇತರೆ ವೃತ್ತಿಪರ ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸಲು ಏಳುವರೆ ಸಾವಿರ ರೂಪಾಯಿ ಅದೇ ರೀತಿ ವಿದ್ಯಾರ್ಥಿನಿಯರಿಗೆ ವಾರ್ಷಿಕವಾಗಿ 8000ಗಳನ್ನು ಈ ಯೋಜನೆಯ ಅಡಿಯಲ್ಲಿ ಪ್ರತಿ ವರ್ಷ ನೀಡಲಾಗುತ್ತದೆ.

ಅದೇ ರೀತಿ ಮೆಡಿಕಲ್ ಕೋರ್ಸ್ ಬಿ ಬೇಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಾರ್ಷಿಕವಾಗಿ 10,000ಗಳನ್ನು ನೀಡುತ್ತಿದ್ದು ಅದೇ ರೀತಿ ವಿದ್ಯಾರ್ಥಿನಿಯರಿಗೆ ವಾರ್ಷಿಕವಾಗಿ 11,000ಗಳನ್ನು ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

ಈ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ರೈತ ಮಕ್ಕಳು ಅರ್ಹರಿರುತ್ತಾರೆ. ಹಾಗೂ ಕರ್ನಾಟಕದ ನಿವಾಸಿ ಆಗಿರಬೇಕು. ಈ ಒಂದು ರೈತ ವಿದ್ಯಾನಿಧಿ ಯೋಜನೆಯ ವಿದ್ಯಾರ್ಥಿ ವೇತನ ಪಡೆಯಲು ನೀವು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ನೀವು ಎಸ್ ಎಸ್ ಪಿ ಸ್ಕಾಲರ್ಶಿಪ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿದರೆ, ನಿಮಗೆ ಈ ಸ್ಕಾಲರ್ಷಿಪ್ ದೊರೆಯುತ್ತದೆ.

ಈ ರೀತಿ ಸರ್ಕಾರದಿಂದ ಅನೇಕ ವಿದ್ಯಾರ್ಥಿ ವೇತನಗಳು ಲಭ್ಯವಿದ್ದು, ಅರ್ಹ ವಿದ್ಯಾರ್ಥಿಗಳಿಗೆ, ಆರ್ಥಿಕ ಸಮಸ್ಯೆಯಿಂದ ವಿದ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗದೇ ಇರುವ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನಗಳು ಅತ್ಯಂತ ಉಪಕಾರಿಯಾಗಿದೆ.

ಇದೇ ರೀತಿ ನಾವು ನಮ್ಮ ಜ್ಞಾನ ಸಂಜೀವಿನಿ ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ರೈತರಿಗೆ ಉಪಯುಕ್ತ ವಾಗುವಂತಹ ಅನೇಕ ಲೇಖನಗಳನ್ನು ನೀಡುತ್ತೇವೆ. ನಿಮಗೆ ಈ ಮಾಹಿತಿಯ ಉಪಯುಕ್ತವೆನಿಸಿದರೆ ನಿಮ್ಮೆಲ್ಲಾ ಸ್ನೇಹಿತರಿಗೂ ಶೇರ್ ಮಾಡಿ.

ಸ್ಕಾಲರ್ಶಿಪ್ ನ  ಹೆಚ್ಚಿನ ಮಾಹಿತಿ:

ನಮಸ್ಕಾರ ಬಂಧುಗಳೇ ನಿಮಗೆ ತಿಳಿದಿರುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ವಿದ್ಯಾರ್ಥಿಗಳಿಗಾಗಿ ಸ್ಕಾಲರ್ಶಿಪ್ ಅನ್ನು ನೀಡುತ್ತಿದ್ದು ನೀವು ಸ್ಟೇಟಸ್ ಸ್ಕಾಲರ್ಶಿಪ್ ಬಗ್ಗೆ ತಿಳಿದುಕೊಂಡಿದ್ದೀರಿ ಹಾಗೆ ಕೇಂದ್ರದಿಂದಲೂ ಕೂಡ ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ ಮುಖಾಂತರ ಸ್ಕಾಲರ್ಶಿಪ್ ನೀಡುತ್ತಿದ್ದು ನೀವು ಅಲ್ಲಿಯೂ ಕೂಡ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಸ್ಕಾಲರ್ಶಿಪ್ ಅನ್ನು ಪಡೆಯಬಹುದಾಗಿದೆ.

ಹಾಗೆ ಇನ್ನಿತರೆ ಮಲ್ಟಿ ನ್ಯಾಷನಲ್ ಕಂಪನಿಗಳು ಕೂಡ ಸ್ಕಾಲರ್ಶಿಪ್ ಅನ್ನು ನೀಡುತ್ತಿದ್ದು ಆ ಸ್ಕಾಲರ್ಶಿಪ್ ಕೂಡ ನೀವು ಅರ್ಜಿ ಸಲ್ಲಿಸಬಹುದಾಗಿದೆ.

ಅಲ್ಲಿ ಕೂಡ ನೀವು ಅರ್ಜಿ ಸಲ್ಲಿಸಬೇಕೆಂದರೆ ನೀವು ಮೊದಲು ನಿಮ್ಮ ಮೊಬೈಲ್ ನಲ್ಲಿ ಒಂದು ಆಪ್ ಇನ್ಸ್ಟಾಲ್ ಮಾಡಿಕೊಳ್ಳಬೇಕಾಗುತ್ತದೆ .

ಹೀಗೆ ಹತ್ತು ಹಲವಾರು ಸ್ಕಾಲರ್ಶಿಪ್ ಗಳು ವಿದ್ಯಾರ್ಥಿಗಳಿಗಾಗಿ ಲಭ್ಯವಿದ್ದು ಮತ್ತು ಸುಲಭವಾಗಿ ಅರ್ಜಿ ಸಲ್ಲಿಸಿ ಅತಿ ಹೆಚ್ಚಿನ ಮೊತ್ತದ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಿ..

ವಿದ್ಯಾರ್ಥಿಗಳಿಗಾಗಿ ಸಹಾಯವಾಗಲೆಂದೆ ಕಾರ್ಮಿಕ ಕಾರ್ಡ್ ಇರುವಂತಹ ವಿದ್ಯಾರ್ಥಿಗಳಿಗೂ ಕೂಡ ರಾಜ್ಯ ಸರ್ಕಾರದಿಂದ ಸ್ಕಾಲರ್ಶಿಪ್ ದೊರೆಯುತ್ತಿದ್ದು ಆ ಸ್ಕಾಲರ್ಶಿಪ್ ಅನ್ನು ನೀವು ಅರ್ಜಿ ಸಲ್ಲಿಸುವ ಮೂಲಕ ಪಡೆದುಕೊಳ್ಳಬಹುದಾಗಿದೆ..

15 ರಿಂದ 20 ಸಾವಿರದ ವರೆಗೂ ನೀವು ಅತಿ ಸುಲಭವಾಗಿ ಪಡೆದುಕೊಳ್ಳಿ ಹಾಗೆ ನಿಮ್ಮ ವಿದ್ಯಾಭ್ಯಾಸಕ್ಕೆ ಸಹಾಯವಾಗಲೆಂದು ಇರುವಂತ ಎಲ್ಲ ಯೋಜನೆಗಳ ಲಾಭವನ್ನು ಪಡೆದುಕೊಂಡು ವಿದ್ಯಾಭ್ಯಾಸದಲ್ಲಿ ಮುನ್ನುಗ್ಗಿ.

ಕೇಂದ್ರ ಸರ್ಕಾರದಿಂದ ಹಾಗೂ ರಾಜ್ಯ ಸರ್ಕಾರದಿಂದ ಇನ್ನಿತರ ಸ್ಪರ್ಧಾರ್ಥಿಗಳ ದೊರೆಯುತ್ತಿದ್ದು ಈ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಬೇಕೆಂದರೆ ನೀವು ಮೊದಲು ಅರ್ಜಿ ಸಲ್ಲಿಸಬೇಕಾಗುತ್ತದೆ ಇದಾದ ಬಳಿಕ ನಿಮ್ಮ ಅರ್ಜಿ ಮಾನ್ಯತೆ ಗೊಂಡರೆ ಮಾತ್ರ ನಿಮ್ಮ ಖಾತೆಗೆ ಸ್ಕಾಲರ್ಶಿಪ್ ಜಮಾ ಆಗುತ್ತದೆ…

ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಸಹಾಯವಾಗಲಿ ಎಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಹೊಸ ಹೊಸ ಯೋಜನೆಗಳನ್ನು ತರುತ್ತಿದ್ದು ಇದೀಗ ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಆಕಾಶವನ್ನು ಕಲ್ಪಿಸಲಾಗಿದ್ದು ಎಲ್ಲ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಹಾಗೆ 15ರಿಂದ 20 ಸಾವಿರದ ವರೆಗೂ ಸ್ಕಾಲರ್ಶಿಪ್ ಅನ್ನು ಪಡೆದುಕೊಳ್ಳಬಹುದಾಗಿದೆ

ಹೀಗೆ ನಮ್ಮ ಜ್ಞಾನ ಸಂಜೀವಿನಿ ವೆಬ್ಸೈಟ್ನಲ್ಲಿ ದಿನೇ ದಿನೇ ಸಹಾಯವಗುವಂತಹ ವಿಷಯಗಳ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದು ಇದೀಗ ಸ್ಕಾಲರ್ಶಿಪ್ ಬಗ್ಗೆ ಮಾಹಿತಿಯನ್ನು ನೀಡಿದ್ದು ಮುಂದಿನ ದಿನಗಳಲ್ಲಿ ರೈತರಿಗೆ ಬೇಕಾಗಿರುವಂತ ಮಾಹಿತಿ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ ಧನ್ಯವಾದಗಳು

Leave a Reply

Your email address will not be published. Required fields are marked *