18 May 2024

ಕರ್ನಾಟಕ ರಸ್ತೆ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ..! ಪಿಯುಸಿ ಪಾಸಾಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ..! Apply Now..

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಬೃಹತ್ ನೇಮಕಾತಿ :

KPSC ಯಿಂದ ಅಧಿಸೂಚನೆ ಬಿಡುಗಡೆ | ನೀವು ಕೂಡ ಈಗಲೇ ಅರ್ಜಿ ಸಲ್ಲಿಸಿ Motor Vehicle Inspector Recruitement 2024

ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಲೋಕಸೇವಾ ಆಯೋಗವು ಇದೀಗ ಅಧಿಕೃತ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ.

ಎಲ್ಲರಿಗೂ ನಮಸ್ಕಾರ ಆತ್ಮೀಯ ಸ್ನೇಹಿತರೆ. ನಮ್ಮ ಈ ಜ್ಞಾನ ಸಂಜೀವಿನಿ ಜಾಲತಾಣದಲ್ಲಿ ನಾವು ದಿನನಿತ್ಯ ರೈತರಿಗೆ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಹಾಯವಾಗುವಂತ ಉಪಯುಕ್ತ ಮಾಹಿತಿಗಳನ್ನು ಪ್ರತಿನಿತ್ಯ ನೀಡುತ್ತಿದ್ದೇವೆ.

ಇಂದಿನ ಈ ಲೇಖನದಲ್ಲಿ ನಾವು ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಮಾಡಿಕೊಳ್ಳಲಾಗುತ್ತಿರುವ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಿಮಗೆ ತಿಳಿಸಲಿದ್ದೇವೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಈ ಲೇಖನವನ್ನು ಕೊನೆಯ ಭಾಗದವರೆಗೂ ಓದಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ನಂತರ ಅರ್ಜಿ ಸಲ್ಲಿಸಲು.

Motor Vehicle Inspector Recruitement 2024 :

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟರು ವಾಹನ ನಿರೀಕ್ಷಕರು ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿ ಮಾಡಿಕೊಳ್ಳುತ್ತಿರುವ ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯ ಸಂಪೂರ್ಣ ಮಾಹಿತಿಯನ್ನು ಈ ಲೆಖನದಲ್ಲಿ ನಾವು ತಿಳಿದುಕೊಳ್ಳೋಣ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು, ಅರ್ಜಿ ಸಲ್ಲಿಸುವುದು ಯಾವಾಗ, ಅರ್ಜಿ ಸಲ್ಲಿಸುವುದು ಹೇಗೆ ಎಂಬ ಇತರೆ ಮಾಹಿತಿಗಳನ್ನು ಈ ಲೇಖನದಲ್ಲಿ ವಿವರವಾಗಿ ನೀಡಲಾಗಿದೆ.

ನೇಮಕಾತಿಗೆ ಸಂಬಂಧಿಸಿದಂತೆ ಸಂಕ್ಷಿಪ್ತ ವಿವರ :

Motor Vehicle Inspector Recruitement 2024

  • ಇಲಾಖೆ ಹೆಸರು : ಕರ್ನಾಟಕ ಸಾರಿಗೆ ಇಲಾಖೆ
  • ನೇಮಕಾತಿ ಮಾಡಿಕೊಳ್ಳುತ್ತಿರುವ ಇಲಾಖೆ : ಕರ್ನಾಟಕ ಲೋಕಸೇವಾ ಆಯೋಗ
  • ಹುದ್ದೆಗಳ ಹೆಸರು : ಮೋಟಾರ್ ವಾಹನ ನಿರೀಕ್ಷಕರು
  • ಉದ್ಯೋಗ ಸ್ಥಳ : ಕರ್ನಾಟಕ
  • ಖಾಲಿ ಇರುವ ಹುದ್ದೆಗಳ ಸಂಖ್ಯೆ : 76 ಸ್ನೇಹಿತರೆ ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ ಒಟ್ಟು 76 ಹುದ್ದೆಗಳು ಖಾಲಿ ಇರುತ್ತವೆ ಈ ಹುದ್ದೆಗಳ ಹೆಸರು ಮೋಟಾರ್ ವಾಹನ ನಿರೀಕ್ಷಕರು ( motor vehicle inspector ). ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವ ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿಗಳ ವಿವರ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ.

Motor Vehicle Inspector Recruitement 2024 :

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟರು ವಾಹನ ನಿರೀಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ವಿದ್ಯಾರ್ಹತೆ :

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವಂತ ಮೋಟಾರ್ ವಾಹನ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 10ನೇ ತರಗತಿ ಜೊತೆಗೆ ಡಿಪ್ಲೋಮಾ ಪದವಿ ಪಡೆದಿರಬೇಕು .

ಈ ಡಿಪ್ಲೋಮಾ ಪದವಿಯು ಆಟೋಮೊಬೈಲ್ ಇಂಜಿನಿಯರಿಂಗ್, ಅಥವಾ ಬಿಟೆಕ್ ಇನ್ ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಬಿ ಟೆಕ್ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಷಯದಲ್ಲಿ ಪದವಿ ಮುಗಿಸಿರುವಂತಹ ಅಭ್ಯರ್ಥಿಗಳು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳನ್ನು ಹೊಂದಿರುತ್ತಾರೆ.

ಶೈಕ್ಷಣಿಕ ವಿದ್ಯಾರ್ಹತೆಯ ಜೊತೆಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಡ್ರೈವಿಂಗ್ ಲೈಸೆನ್ಸ್ ಹೊಂದಿರುವುದು ಕೂಡ ಕಡ್ಡಾಯವಾಗಿರುತ್ತದೆ.

ಅರ್ಜಿ ಸಲ್ಲಿಸಲು ವಯೋಮಿತಿ ವಿವರ :

ಸ್ನೇಹಿತರೆ ಕರ್ನಾಟಕ ರಾಜ್ಯದ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವಂತ ಮೋಟಾರ್ ವಾಹನ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ ವಯೋಮಿತಿಯು ಅಧಿಕೃತ ಅಧಿಸೂಚನೆ ಪ್ರಕಾರ 35 ವರ್ಷಗಳಿಗೆ ನಿಗದಿಪಡಿಸಲಾಗಿರುತ್ತದೆ.

ಈ ಒಂದು ಗರಿಷ್ಟ ವಯೋಮಿತಿಯಲ್ಲಿ ಮೀಸಲಾತಿ ಬಯಸುವಂತಹ ಅಭ್ಯರ್ಥಿಗಳಿಗೆ ವರ್ಗಗಳಿಗೆ ಅನುಗುಣವಾಗಿ ಗರಿಷ್ಟ ವಯೋಮಿತಿಯಲ್ಲಿ ವಯೋಮಿತಿ ಸಡಿಲಿಕೆ ನೀಡಲಾಗುವುದು.

  • ಹಿಂದುಳಿದ ವರ್ಗಗಳ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿಯು 38 ವರ್ಷ ನಿಗದಿಪಡಿಸಲಾಗಿರುತ್ತದೆ.
  • ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ ಒಂದು ವರ್ಗದ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯು 40 ವರ್ಷಗಳಿಗೆ ನಿಗದಿಪಡಿಸಲಾಗಿರುತ್ತದೆ. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆ ಹೊಂದಿದ್ದರು ಕೂಡ ಈ ಒಂದು ವಯೋಮಿತಿ ವಿವರವನ್ನು ಪರಿಶೀಲಿಸಿಕೊಂಡ ನಂತರ ನೀವು ಅರ್ಹರಿದ್ದರೆ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಒಂದು ವೇಳೆ ನೀವು ತಪ್ಪಾಗಿ ಮಾಹಿತಿ ಸಲ್ಲಿಸಿ ಅರ್ಜಿ ಸಲ್ಲಿಸಿದಾದಲ್ಲಿ, ನಿಮ್ಮ ಅರ್ಜಿಯನ್ನು ತಿರಸ್ಕರಿಸಲಾಗುವುದು ಎಂದು ಅಧಿಕೃತ ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಅರ್ಜಿ ಶುಲ್ಕಗಳ ವಿವರ : ಸ್ನೇಹಿತರೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವಂತಹ ಮೋಟರು ವಾಹನ ನಿರೀಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳಿಗೆ ವರ್ಗಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿರುತ್ತದೆ. ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ನಿಗದಿಪಡಿಸಲಾಗಿರುವ ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿಸಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸಬೇಕು.
  • ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂಪಾಯಿಯನ್ನು ನಿಗದಿಪಡಿಸಲಾಗಿದೆ.
  • ಹಿಂದುಳಿದ ವರ್ಗದ ಅಡಿಯಲ್ಲಿ ಬರುವಂತಹ ಪ್ರವರ್ಗ 2a, 2b, 3a, 3b ವರ್ಗದ ಅಭ್ಯರ್ಥಿಗಳಿಗೆ ರೂ.300 ಅರ್ಜಿ ಶುಲ್ಕವಾಗಿ ನಿಗದಿಪಡಿಸಲಾಗಿದೆ.
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ರೂ.50 ನಿಗದಿಪಡಿಸಲಾಗಿರುತ್ತದೆ.
  • ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಅಡಿಯಲ್ಲಿ ಬರುವಂತಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ ಆದ್ದರಿಂದ ಈ ವರ್ಗದ ಅಭ್ಯರ್ಥಿಗಳು ಅರ್ಜಿಯನ್ನು ಉಚಿತವಾಗಿ ಸಲ್ಲಿಸಬಹುದು.

ವೇತನ ಶ್ರೇಣಿ :

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವಂತ ಮೋಟಾರ್ ವಾಹನ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ರೂಪಾಯಿ 33,450 ರಿಂದ ರೂಪಾಯಿ 62,600 ವರೆಗೆ ನಿಗದಿಪಡಿಸಲಾಗಿದೆ.

ಹುದ್ದೆಗಳಿಗೆ ಅರ್ಜಿಯನ್ನು ಹೇಗೆ ಸಲ್ಲಿಸಬೇಕು?

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವಂತಹ ಮೋಟಾರ್ ವಾಹನ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡ ನಂತರ ಸರಿಯಾದ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ.

ಪ್ರತಿ ಸಲ್ಲಿಸಲು ನಿಗದಿಪಡಿಸಲಾಗಿರುವ ಪ್ರಮುಖ ದಿನಾಂಕಗಳು :

  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗುವ ದಿನಾಂಕ : 22 ಏಪ್ರಿಲ್ 2024
  • ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಕ್ತಾಯಗೊಳ್ಳುವ ದಿನಾಂಕ : 21 ಮೇ 2024

ಅರ್ಜಿ ಸಲ್ಲಿಸಲು ಲಿಂಕ್ : kpsc.kar.nic.in

ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕೊನೆ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಿ ಈ ಒಂದು ಸುವರ್ಣ ಅವಕಾಶವನ್ನು ನಿಮ್ಮದಾಗಿಸಿಕೊಳ್ಳಿ.

ಇದೇ ರೀತಿ ನಮ್ಮ ಈ ಜ್ಞಾನ ಸಂಜೀವಿನಿ ಜಾಲತಾಣದಲ್ಲಿ ಪ್ರತಿನಿತ್ಯ ಸರಕಾರಿ ಉದ್ಯೋಗ ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದಂತ ಮಾಹಿತಿಯನ್ನು ನೀಡುತ್ತಿವೆ. ಪ್ರತಿನಿತ್ಯ ಈ ತರಹದ ಅಪ್ಡೇಟ್ಸ್ ಗಳನ್ನು ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿರಿ.

Leave a Reply

Your email address will not be published. Required fields are marked *